Webdunia - Bharat's app for daily news and videos

Install App

ಐಪಿಎಲ್‌ ಚಾಂಪಿಯನ್‌ ತಂಡಕ್ಕೆ ಸಿಗಲಿದೆ ಮಿನುಗುವ ಟ್ರೋಫಿಯೊಂದಿಗೆ ಬರೋಬ್ಬರಿ ₹20 ಕೋಟಿ ಬಹುಮಾನ

Sampriya
ಭಾನುವಾರ, 26 ಮೇ 2024 (12:34 IST)
Photo Courtesy X
ಚೆನ್ನೈ: ಇಂದು ಚೆನ್ನೈನಲ್ಲಿ ಐಪಿಎಲ್ ಟೂರ್ನಿಯ ಫೈನಲ್​ ಪಂದ್ಯ ನಡೆಯಲಿದೆ. ಕೋಲ್ಕತ್ತಾ ನೈಟ್​ ರೈಡರ್ಸ್ ಮತ್ತು ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಎಂಬ ಹಿರಿಮೆಗೆ ಪಾತ್ರವಾಗಿರುವ ಐಪಿಎಲ್‌ ವಿಜೇತ ತಂಡವು ಆಕರ್ಷಕ ಟ್ರೋಫಿಯೊಂದಿಗೆ ಬರೋಬ್ಬರಿ ₹20 ಕೋಟಿ ಬಹುಮಾನವನ್ನು ಜೇಬಿಗಿಳಿಸಲಿದೆ.

ರನ್ನರ್ ಅಪ್‌ ತಂಡಕ್ಕೆ ₹ 15 ಕೋಟಿ ಸಿಗಲಿದೆ. ಮೂರನೇ ಸ್ಥಾನಿಯಾದ ರಾಜಸ್ಥಾನ ರಾಯಲ್ಸ್‌ಗೆ ₹ 7 ಕೋಟಿ ಮತ್ತು ಚತುರ್ಥ ಸ್ಥಾನ ಪಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ₹ 6.5 ಕೋಟಿ ಬಹುಮಾನ ಸಿಗಲಿದೆ  ಸಿಗಲಿದೆ. ಒಟ್ಟು ಬಹುಮಾನ ಮೊತ್ತ ₹ 46.5 ಕೋಟಿ ಆಗಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ ₹ 15 ಲಕ್ಷ ಬಹುಮಾನ ಸಿಗಲಿದೆ. ಸದ್ಯ ಬೆಂಗಳೂರು ತಂಡದ ವಿರಾಟ್​ ಕೊಹ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಈ ಟೂರ್ನಿಯಲ್ಲಿ ಅವರ ರನ್‌ ಹಿಂದಿಕ್ಕಲು ಸದ್ಯ ಯಾರಿಗೂ ಅಸಾಧ್ಯವಾಗಿದೆ.

24 ವಿಕೆಟ್​ ಪಡೆದಿರುವ ಪಂಜಾಬ್ ಕಿಂಗ್ಸ್​​ ತಂಡದ ಹರ್ಷಲ್​ ಪಟೇಲ್​ ಬಳಿ ಪರ್ಪಲ್​ ಕ್ಯಾಪ್​ ಸದ್ಯ  ಇದೆ. ಆದರೆ ಈ ಕ್ಯಾಪ್​ ಪಡೆಯಲು ಕೆಕೆಆರ್​ ತಂಡದ ಸ್ಪಿನ್ನರ್​ ವರಣ್​ ಚರ್ಕವರ್ತಿಗೆ ಉತ್ತಮ ಅವಕಾಶವಿದೆ. ವರುಣ್​ ಸದ್ಯ 20 ವಿಕೆಟ್​ ಕಿತ್ತಿದ್ದಾರೆ. ಫೈನಲ್​ ಪಂದ್ಯದಲ್ಲಿ 5 ವಿಕೆಟ್​ ಕಿತ್ತರೆ ಈ ಕ್ಯಾಪ್​ ಅವರ ಪಾಲಾಗಲಿದೆ.

ಟೂರ್ನಿಯ ಉದಯೋನ್ಮುಖ ಆಟಗಾರನಿಗೆ ₹ 20 ಲಕ್ಷ ರೂಪಾಯಿ ನಗದು ಬಹುಮಾನವನ್ನು ಸಿಗಲಿದೆ. ಋತುವಿನ ಅತ್ಯಂತ ಮೌಲ್ಯಯುತ ಆಟಗಾರ ₹ 12 ಲಕ್ಷ ದೊರೆಯಲಿದೆ. ಇತರ ಪ್ರಶಸ್ತಿಗಳಾದ-ಪವರ್ ಪ್ಲೇಯರ್ ಆಫ್ ದಿ ಸೀಸನ್, ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಮತ್ತು ಗೇಮ್ ಚೇಂಜರ್ ಆಫ್ ದಿ ಸೀಸನ್ ಪಡೆದ ಆಟಗಾರ ಕ್ರಮವಾಗಿ ₹ 15 ಲಕ್ಷ ಮತ್ತು ₹ 12 ಲಕ್ಷ ನಗದು ಬಹುಮಾನ ಪಡೆಯಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments