Webdunia - Bharat's app for daily news and videos

Install App

ನಾವೇಕೆ ಅಸಮರ್ಥರನ್ನು ಶಾಸಕರನ್ನಾಗಿಸಿದೆವು?: ಪ್ರೊ. ಜಿ.ವಿ.

ಬೈಗುಳ ಅಸಮರ್ಥರ ಆಯುಧ ಎಂದರು ಸಾಹಿತ್ಯ ಸಮ್ಮೇಳನಾಧ್ಯಕ್ಷರು

Webdunia
ಶುಕ್ರವಾರ, 4 ಫೆಬ್ರವರಿ 2011 (15:35 IST)
ಬೆಂಗಳೂರ ು: ಕರ್ನಾಟಕದ ರಾಜಕೀಯ ಸ್ಥಿತಿಗತಿಯ ಬಗ್ಗೆ ರೋಸಿ ಹೋಗಿರುವ ಜನತೆಯ ಧ್ವನಿಯನ್ನು ಸಮರ್ಥವಾಗಿಯೇ ಬಿಂಬಿಸಿದ್ದಾರೆ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಭಾಷಾ ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ. ಆರೋಪ-ಪ್ರತ್ಯಾರೋಪ, ಅಸಭ್ಯ ನಿಂದನೆಗಳಲ್ಲೇ ಕಾಲ ಕಳೆಯುತ್ತಿರುವ ರಾಜಕಾರಣಿಗಳ ಕಚ್ಚಾಟದ ಬಗೆಗೆ ಕನ್ನಡಿಗನ ಒಡಲ ವೇದನೆಯು ಅವರ ಭಾಷಣದಲ್ಲಿ ಹೊರಬಿದ್ದಿದೆ.

ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶುಕ್ರವಾರದಿಂದ ಮೂರು ದಿನ ನಡೆಯುತ್ತಿರುವ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ವಹಿಸಿ ಕನ್ನಡಿಗನ ಒಡಲ ಧ್ವನಿಯನ್ನು ಹೊರಗೆಡಹಿದ ಅವರು, ರಾಜಕಾರಣಿಗಳ ಮೇಲೆ ಚಾಟಿ ಬೀಸಿದರು.

ಬೈಗುಳ ಅಸಮರ್ಥರ ಆಯುಧ. ಅದು ದುರ್ಬಲರು ಉಪಯೋಗಿಸುವ ಚುಚ್ಚುಗತ್ತಿ. ಅದನ್ನು ಉಪಯೋಗಿಸಬಾರದು. ಹಲವು ಶಾಸಕರ ಮಾತಿನಲ್ಲಿ, ನಡೆಯಲ್ಲಿ, ವ್ಯವಹಾರದಲ್ಲಿ, ಯಾವುದರಲ್ಲಿಯೂ ಗಾಂಭೀರ್ಯವಾಗಲಿ, ಸುಸಂಸ್ಕೃತಿಯಾಗಲಿ ಕಾಣಬರುತ್ತಿಲ್ಲ ಎಂದು ವಿಷಾದಿಸುತ್ತಾ ರಾಜಕೀಯದ ಬಗ್ಗೆ ಹರಿಹಾಯ್ದ ವೆಂಕಟಸುಬ್ಬಯ್ಯ, ಪ್ರಜಾವರ್ಗದ ನೆಮ್ಮದಿ ಕೆಟ್ಟಿದೆ. ಗೊಂದಲದಿಂದ ಸಮಾಧಾನವೇ ನಾಶವಾಗಿದೆ. ಪ್ರಜೆಗಳಲ್ಲಿ ನಾವೇಕೆ ಇಂಥ ಅಸಮರ್ಥರನ್ನು ಶಾಸಕರನ್ನಾಗಿ ಮಾಡಿದೆವು ಎಂದು ತಮ್ಮನ್ನೂ ಎಲ್ಲ ಪಕ್ಷಗಳನ್ನೂ ನಿಂದಿಸುತ್ತಾ ಇದ್ದಾರೆ. ಪ್ರಜೆಗಳನ್ನು ಕಾಪಾಡುವವರೇ ಕಾದಾಡುತ್ತಿರುವುದು ವಿಪರ್ಯಾಸ ಎಂದು ವಿಷಾದಿಸಿದರು.

ಕ್ಲೈಮ್ಯಾಕ್ಸ್ ಇಲ್ಲವಾಗಿದೆ ರಾಜಕೀಯ ಪ್ರಹಸನಕ್ಕೆ...
ಈಗ ಕರ್ನಾಟಕವು ಭಾರತದಲ್ಲಿಯೇ ಅತ್ಯಂತ ಭ್ರಷ್ಟವಾದ ರಾಜ್ಯ ಎಂಬ ಹೆಸರನ್ನು ಸಂಪಾದಿಸಿಬಿಟ್ಟಿದೆ. ಭಾರತದ ಸಂವಿಧಾನವು ಒಂದು ಉತ್ಕೃಷ್ಟ ರಾಜ್ಯಧರ್ಮಶಾಸ್ತ್ರದಂತೆ ಇದೆ ಎಂದು ಹೆಸರು ಪಡೆದಿದೆ. ಹೀಗಿದ್ದೂ ಅದನ್ನು ತಿರಸ್ಕರಿಸಿ ರಾಜಕೀಯ ಪಕ್ಷಗಳು ಅಧಿಕಾರ ದಾಹದಿಂದ ಕಚ್ಚಾಡುತ್ತಿವೆ ಎಂದರು.

ಈ ಕಾದಾಟ ಪಕ್ಷದ್ವೇಷ ಅಥವಾ ಅಧಿಕಾರ ದಾಹ ಎಂಬ ಒಂದು ದುರಂತ ನಾಟಕವಾಗಿಬಿಟ್ಟಿದೆ. ದಿನಕ್ಕೊಂದು ದೃಶ್ಯ, ವಾರಕ್ಕೊಂದು ಅಂಕ ಎಂಬಂತೆ ಇದು ಮುಂದುವರಿದಿದೆ. ನಮಗೆ ಇದು ದುರಂತ. ಇತರ ಪ್ರಾಂತಗಳವರಿಗೆ ಪ್ರಹಸನ. ಹೀಗೆ ಇಮ್ಮುಖವಾದ ಈ ನಾಟಕವು ಇನ್ನೂ ಕ್ಲೈಮಾಕ್ಸ್ ಎಂಬ ಶಿಖರ ತಲುಪಿಲ್ಲ. ಇಷ್ಟರಲ್ಲೇ ತಲುಪಬಹುದು ಎಂದರು ವೆಂಕಟಸುಬ್ಬಯ್ಯ.

ಕನ್ನಡ ತಾಯಿ ಭುವನೇಶ್ವರಿ ನಮ್ಮ ನಾಯಕಮಣಿಗಳಾದ ಈ ರಾಜಕೀಯ ವ್ಯಕ್ತಿಗಳಿಗೆ ಸನ್ಮತಿಯನ್ನು ನೀಡಲಿ ಎಂದು ಪ್ರಾರ್ಥಿಸಬೇಕಾಗಿದೆ. ರಾಜಕೀಯ ಪಕ್ಷಗಳಿಗೆ ಅಧಿಕಾರದ ಹುಚ್ಚು ದಾಹವನ್ನು ಬಿಟ್ಟು ನಾಡಿನ ಸೌಖ್ಯಕ್ಕೆ ದುಡಿಯುವ ಬುದ್ಧಿಯು ಬರಲಿ ಎಂದು ಹಾರೈಸೋಣ. ಪ್ರಜೆಗಳಾದ ನಾವು ಇಂಥ ವರ್ಗದಿಂದ ಬೇರೆಯಾಗಿ ತಲೆತುಂಬ ಕಲಿಯೋಣ, ತಲೆ ಎತ್ತಿ ನುಡಿಯೋಣ, ತಲೆಬಾಗಿ ಬಾಳೋಣ ಎಂದವರು ಸಂದೇಶ ನೀಡಿದರು.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments