Webdunia - Bharat's app for daily news and videos

Install App

ಶಂಕರ ಬಟ್ ಕನ್ನಡ ನುಡಿಯರಿಮೆ: ಸಂಶೋಧನೆ ಮಾಡ್ತೀರಾ?

Webdunia
ಬನವಾಸಿ ಬಳಗವು ಕನ್ನಡ ನುಡಿಯರಿಮೆ ವಲಯದಲ್ಲಿ ಹೆಚ್ಚಿನ ಸಂಶೋಧನೆಗೆ ಒತ್ತು ನೀಡುತ್ತಾ ಡಾ. ಡಿ. ಎನ್. ಶಂಕರಬಟ್ಟರ ಮುಂದಾಳ್ತನದಲ್ಲಿ ಒಂದು ವರ್ಷದ ತರಬೇತಿ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

ಈ ಶಿಬಿರವು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಶುರುವಾಗಲಿದ್ದು, ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ನಾಲ್ಕು ಶಿಬಿರಗಳು ನಡೆಯಲಿವೆ. ಪ್ರತೀ ಶಿಬಿರದಲ್ಲೂ ಮೂರು ದಿನಗಳ ತರಬೇತಿ ಇರುತ್ತದೆ.

ಇದರಲ್ಲಿ ನುಡಿಯರಿಮೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ, ನುಡಿಯರಿಮೆಯ ಅಧ್ಯಯನ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ನೋಂದಣಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರನ್ನು ಸಂದರ್ಶಿಸಿ ತರಬೇತಿ ಶಿಬಿರಕ್ಕೆ ಸೇರಿಸಿಕೊಳ್ಳಲಾಗುತ್ತದೆ.

ನುಡಿಯರಿಮೆಯ ಕ್ಷೇತ್ರದಲ್ಲಿ, ಡ ಾII ಡಿ. ಎನ್. ಶಂಕರ ಬಟ್ ಅವರ ಮುಂದಾಳ್ತನದಲ್ಲಿ ಸಂಶೋಧನೆಗಳನ್ನು ಮಾಡ ಬಯಸುವವರು ವಿವರಗಳನ್ನು priyank @ banavasibalaga.org ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. ಈ ಬಾರಿಯ ತರಬೇತಿ ಶಿಬಿರವು ಬೆಂಗಳೂರಿನಿಂದಾಚೆ ನಡೆಯಲಿದ್ದು ಬನವಾಸಿ ಬಳಗವೇ ಉಳಿದುಕೊಳ್ಳುವ, ಊಟ ತಿಂಡಿಯ ಏರ್ಪಾಟು ಮಾಡಲಿದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments