Select Your Language

Notifications

webdunia
webdunia
webdunia
webdunia

ಉದ್ಯೋಗಿಗಳ ವೇತನ ಹೆಚ್ಚಳಕ್ಕೆ ವಿಪ್ರೋ ನಿರ್ಧಾರ

ಉದ್ಯೋಗಿಗಳ ವೇತನ ಹೆಚ್ಚಳಕ್ಕೆ ವಿಪ್ರೋ ನಿರ್ಧಾರ
ಬೆಂಗಳೂರು , ಗುರುವಾರ, 24 ಮಾರ್ಚ್ 2011 (11:38 IST)
PTI
ದೇಶದ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿಪ್ರೋ ಸಂಸ್ಥೆ, ಕಾರ್ಯನಿರ್ವಹಣೆಯಲ್ಲಿ ಕೆಲ ಬದಲಾವಣೆಗಳೊಂದಿಗೆ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಕಂಪೆನಿಯ ಕಾರ್ಯನಿರ್ವಹಣೆ ಬದಲಾವಣೆ ಕುರಿತಂತೆ ಮಾರ್ಗದರ್ಶನಗಳನ್ನು ರೂಪಿಸಿದ್ದು, ಶೀಘ್ರದಲ್ಲಿ ಜಾರಿಗೆ ಬರಲಿವೆ ಎಂದು ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿಕೆ ಕುರಿಯನ್ ತಿಳಿಸಿದ್ದಾರೆ.

ಕಂಪೆನಿಯ ಉದ್ಯೋಗಿಗಳ ಪ್ರತಿ ವರ್ಷದ ವೇತನ ಹೆಚ್ಚಳಕ್ಕೆ ಸಮಯವನ್ನು ನಿಗದಿಪಡಿಸಲಾಗುವುದು. ಮುಂಬರುವ ಏಪ್ರಿಲ್‌ನಿಂದ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

ವಿಪ್ರೋ ಕಂಪೆನಿಯ ಅಡಳಿತ ಮಂಡಳಿ, ಜಂಟಿ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯನ್ನು ತೆಗೆದುಹಾಕಿ, ಕುರಿಯನ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

Share this Story:

Follow Webdunia kannada