Select Your Language

Notifications

webdunia
webdunia
webdunia
webdunia

ಆರ್​ಬಿಐನಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 1 ಕೋಟಿ ದಂಡ

ಆರ್​ಬಿಐನಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 1 ಕೋಟಿ ದಂಡ
ನವದೆಹಲಿ , ಮಂಗಳವಾರ, 19 ಅಕ್ಟೋಬರ್ 2021 (09:28 IST)
ನವದೆಹಲಿ : ಕೆಲವು ನಿರ್ದೇಶನಗಳನ್ನು ಪಾಲನೆ ಮಾಡದಿದ್ದಕ್ಕಾಗಿ ಅಕ್ಟೋಬರ್ 18, 2021ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಒಂದು ಕೋಟಿ ರೂಪಾಯಿ ದಂಡವನ್ನು ವಿಧಿಸಿದೆ.

ವಾಣಿಜ್ಯ ಬ್ಯಾಂಕ್ಗಳು ಮತ್ತು ಆಯ್ದ ಹಣಕಾಸು ಸಂಸ್ಥೆಗಳ ವಂಚನೆಗಳ ವರ್ಗೀಕರಣ ಮತ್ತು ವರದಿ ಮಾಡುವುದಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆ ಇದಾಗಿದೆ ಎಂದು ಆರ್‌ಬಿಐ ಹೇಳಿದೆ. ನಿಯಂತ್ರಕ ಸಂಸ್ಥೆಯ ನಿಯಮಾವಳಿಗಳನ್ನು ಅನುಸರಿಸದ ಕೊರತೆಗಳ ಆಧಾರದ ಮೇಲೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಬ್ಯಾಂಕ್ ತನ್ನ ಗ್ರಾಹಕರೊಂದಿಗೆ ಮಾಡಿಕೊಂಡ ಯಾವುದೇ ವಹಿವಾಟು ಅಥವಾ ಒಪ್ಪಂದದ ಸಿಂಧುತ್ವಕ್ಕೆ ಇದು ಸಂಬಂಧಿಸಿದ್ದಲ್ಲ ಎಂದು ಕೇಂದ್ರ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾಂಕ್ನಲ್ಲಿ ನಿರ್ವಹಿಸಲಾದ ಗ್ರಾಹಕರ ಖಾತೆಯಲ್ಲಿ ಆರ್‌ಬಿಐ ಪರಿಶೀಲನೆ ನಡೆಸಿದ್ದು, ಖಾತೆಯಲ್ಲಿನ ವಂಚನೆಯ ವರದಿಯಲ್ಲಿ ನಿರ್ದೇಶನಗಳನ್ನು ಅನುಸರಿಸದಿರುವುದು ಬಹಿರಂಗಪಡಿಸಿದೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಬಗ್ಗೆ ಕಾಂಗ್ರೆಸ್ನಿಂದ ಅವಹೇಳನಕಾರಿ ಟ್ವೀಟ್