Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Krishnaveni K
ಗುರುವಾರ, 29 ಮೇ 2025 (11:29 IST)
ಬೆಂಗಳೂರು: ಅಡಿಕೆ ಬೆಳೆಗಾರರು ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದರೆ ನಿರಾಸೆಯಾಗಲಿದೆ. ಇಂದೂ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆ ಏರಿಕೆಯಾಗುತ್ತಿರುವುದು ಬೆಳೆಗಾರರಿಗೆ ಖುಷಿ ಮೂಡಿಸಿತ್ತು. ಆದರೆ ಈಗ ಅಡಿಕೆ ಬೆಲೆ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಾಗಿದೆ. ಇಂದು ಸತತ ನಾಲ್ಕನೇ ದಿನವೂ ಬೆಲೆ ಯಥಾ ಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 495 ರೂ.ಗಳಷ್ಟೇ ಇದೆ.  ಹಳೆ ಅಡಿಕೆ ಬೆಲೆ ಯೂ ನಿನ್ನೆಯಷ್ಟೇ ಅಂದರೆ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಫಟೋರ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 370 ರೂ.ಗಳಷ್ಟಿದೆ. ಹಳೆ ಫಟೋರ ದರ 375 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 260 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ ತಲಾ 315 ರೂ.ಆಗಿದೆ.
ಕಾಳುಮೆಣಸು ದರ
ಆದರೆ ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಕಾಳುಮೆಣಸು ಬೆಳೆಗಾರರಿಗೆ ಮಾತ್ರ ಮತ್ತೆ ನಿರಾಸೆಯಾಗಿದೆ. ಕಾಳುಮೆಣಸು ದರವೂ ಯಾವುದೇ ಏರಿಕೆ ಅಥವಾ ಇಳಿಕೆಯಾಗಿಲ್ಲ. ಇಂದು ಗರಿಷ್ಠ ದರ 650 ರೂ.ಗಳಾಗಿದೆ. ಇನ್ನು ಒಣಕೊಬ್ಬರಿ ಬೆಲೆಯೂ ಯಥಾಸ್ಥಿತಿಯಲ್ಲಿದ್ದು ಗರಿಷ್ಠ 190 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments