Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Krishnaveni K
ಮಂಗಳವಾರ, 10 ಜೂನ್ 2025 (11:05 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ನಿಂತ ನೀರಾಗಿತ್ತು. ಇಂದು ಏರಿಕೆಯಾಗಬಹುದು, ನಾಳೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ನಿರಾಸೆಯಾಗಿದೆ. ನಿನ್ನೆ ಇಳಿಕೆ ಕಂಡಿದ್ದ ಅಡಿಕೆ ಬೆಲೆ ಇಂದು ಯಥಾ ಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

 ಕಳೆದ ವಾರವಿಡೀ ಅಡಿಕೆ ಬೆಲೆ ಹೆಚ್ಚಾಗದೇ ಇದ್ದರೂ ಯಥಾಸ್ಥಿತಿಯಲ್ಲಿದ್ದಿದ್ದರಿಂದ ಬೆಳೆಗಾರರು ನೆಮ್ಮದಿಯಾಗಿದ್ದರು. ಆದರೆ ಇಂದು ಅಡಿಕೆ ಬೆಲೆ ವಾರದ ಆರಂಭದಲ್ಲೇ ಇಳಿಕೆಯಾಗಿ ಬೆಳೆಗಾರರಿಗೆ ಶಾಕ್ ಸಿಕ್ಕಿತ್ತು. ನಿನ್ನೆ ಹೊಸ ಅಡಿಕೆ ಬೆಲೆ 10 ರೂ. ಕಡಿಮೆಯಾಗಿ 485 ರೂ.ಗಳಾಗಿತ್ತು. ಇಂದೂ ಅದೇ ಬೆಲೆಯಿದೆ.  ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಹೊಸ ಪಟೋರ ಮತ್ತು ಹಳೆ ಪಟೋರ ಎರಡೂ ನಿನ್ನೆ ತಲಾ 5 ಮತ್ತು 10 ರೂ.ಗಳಷ್ಟು ಇಳಿಕೆಯಾಗಿತ್ತು. ಇಂದು ಎರಡೂ ಏರಿಕೆಯೂ ಆಗಿಲ್ಲ, ಇಳಿಕೆಯೂ ಆಗಿಲ್ಲ. ಇಂದು ಹೊಸ ಪಟೋರ  ದರ 365 ರೂ.ಗಳಷ್ಟಿದೆ. ಹಳೆ ಫಟೋರ ದರ 365 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 255 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ ತಲಾ 315 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿ 10 ರೂ.ಗಳಷ್ಟು ಏರಿಕೆಯಾಗಿತ್ತು. ಆದರೆ ಇಂದು ಅದೂ ಯಥಾಸ್ಥಿತಿಯಲ್ಲಿದೆ. ಇಂದು 660 ರೂ.ಗಳಾಗಿವೆ. ಇನ್ನು ಒಣಕೊಬ್ಬರಿ ಬೆಲೆಯೂ ಯಥಾಸ್ಥಿತಿಯಲ್ಲಿದ್ದು ಗರಿಷ್ಠ 200 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments