Daily Horoscope

Select Your Language

Notifications

webdunia
webdunia
webdunia
webdunia

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Arecanut
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ನಿರಾಸೆಯಾಗಿದೆ.  ಕಾಳು ಮೆಣಸು, ಕೊಬ್ಬರಿ ಬೆಲೆ ಕೂಡಾ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ವಾರದ ಆರಂಭದಲ್ಲೇ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿದೆ. ಆದರೆ ಈಗ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 370 ರೂ.ಗಳಷ್ಟಿತ್ತು. ಆದರೆ ಇಂದು 5 ರೂ. ಇಳಿಕೆಯಾಗಿದ್ದು 365 ರೂ. ಗೆ ಬಂದು ತಲುಪಿದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಳೆದ ವಾರ ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಏರಿಕೆಯಾಗಿತ್ತು.  ಆದರೆ ಇಂದು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದ್ದು 655 ರೂ.ಗಳಷ್ಟಿವೆ. ಒಣ ಕೊಬ್ಬರಿ ಬೆಲೆ ಇಂದು 260 ರೂ.ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ