Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Krishnaveni K
ಗುರುವಾರ, 10 ಜುಲೈ 2025 (11:28 IST)
ಬೆಂಗಳೂರು: ಇಂದೂ ಅಡಿಕೆ ಬೆಲೆಯಲ್ಲಿ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ಇಂದೂ ಕೊಂಚ ಏರಿಕೆಯಾಗಿದೆ.  ಕಾಳು ಮೆಣಸು, ಬೆಲೆ ಕೂಡಾ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ಏಳಿಗೆ ಕಂಡುಬರುತ್ತಿಲ್ಲ. ಇದು ರೈತರ ಚಿಂತೆಗೆ ಕಾರಣವಾಗಿದೆ.  ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 365 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಳೆದ ವಾರ ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಏರಿಕೆಯಾಗಿತ್ತು.  ಆದರೆ ಇಂದು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದ್ದು 655 ರೂ.ಗಳಷ್ಟಿವೆ. ಒಣ ಕೊಬ್ಬರಿ ಬೆಲೆ  ಮಾತ್ರ 5 ರೂ. ಏರಿಕೆಯಾಗಿದ್ದು 270 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments