Daily Horoscope

Select Your Language

Notifications

webdunia
webdunia
webdunia
webdunia

Arecanut Price: ಅಡಿಕೆ, ಕಾಳುಮೆಣಸು, ಕೊಬ್ಬರಿ ಬೆಲೆ ಎಷ್ಟಾಗಿದೆ ನೋಡಿ

Coconut
ಬೆಂಗಳೂರು: ಇಂದೂ ಅಡಿಕೆ ಬೆಲೆಯಲ್ಲಿ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ಇಂದೂ ಕೊಂಚ ಏರಿಕೆಯಾಗಿದೆ.  ಕಾಳು ಮೆಣಸು, ಬೆಲೆ ಕೂಡಾ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ಏರಿಕೆ ಕಂಡುಬರುತ್ತಿಲ್ಲ. ಇದು ರೈತರ ಚಿಂತೆಗೆ ಕಾರಣವಾಗಿದೆ.  ಹೊಸ ಅಡಿಕೆ ಬೆಲೆ ಮೊನ್ನೆಯಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 365 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಳೆದ ವಾರ ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಏರಿಕೆಯಾಗಿತ್ತು.  ಆದರೆ ಇಂದು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದ್ದು 655 ರೂ.ಗಳಷ್ಟಿವೆ. ಒಣ ಕೊಬ್ಬರಿ ಬೆಲೆ  ಮಾತ್ರ ಇಂದೂ ಮತ್ತೆ 5 ರೂ. ಏರಿಕೆಯಾಗಿದ್ದು 275 ರೂ.ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ