Publish Date: Sat, 12 Jul 2025 (11:21 IST)
Updated Date: Sat, 12 Jul 2025 (11:23 IST)
ಬೆಂಗಳೂರು: ಇಂದೂ ಅಡಿಕೆ ಬೆಲೆಯಲ್ಲಿ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಆದರೆ ಕೊಬ್ಬರಿ ಬೆಲೆ ಮಾತ್ರ ಇಂದೂ ಕೊಂಚ ಏರಿಕೆಯಾಗಿದೆ. ಕಾಳು ಮೆಣಸು ಬೆಲೆ ಕೊಂಚ ಇಳಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ನಿಂತ ನೀರಾಗಿದೆ. ಬೆಲೆ ಏರಿಕೆಯ ಲಕ್ಷಣವಂತೂ ಕಂಡುಬರುತ್ತಿಲ್ಲ. ಇದು ರೈತರ ಚಿಂತೆಗೆ ಕಾರಣವಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 475 ರೂ.ಗಳಷ್ಟಿದೆ. ಇಂದೂ ಅದೇ ಬೆಲೆ ಮುಂದುವರಿದಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ. ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 365 ರೂ. ಗಳಷ್ಟೇ ಇದೆ. ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.
ಕಾಳುಮೆಣಸು, ಕೊಬ್ಬರಿ ದರ
ಕಳೆದ ವಾರ ಕಾಳುಮೆಣಸು ಮತ್ತು ಕೊಬ್ಬರಿ ಬೆಲೆಯಲ್ಲಿ ಏರಿಕೆಯಾಗಿತ್ತು. ಆದರೆ ಇಂದು ಕಾಳುಮೆಣಸು ದರ 5 ರೂ. ಇಳಿಕೆಯಾಗಿದ್ದು 650 ರೂ.ಗಳಷ್ಟಿವೆ. ಒಣ ಕೊಬ್ಬರಿ ಬೆಲೆ ಯಥಾಸ್ಥಿತಿಯಲ್ಲಿದ್ದು 275 ರೂ.ಗಳಾಗಿದೆ.