Publish Date: Fri, 01 Aug 2025 (11:32 IST)
Updated Date: Fri, 01 Aug 2025 (11:34 IST)
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಅಡಿಕೆ ಬೆಲೆ ಯಥಾಸ್ಥಿತಿಯಲ್ಲೇ ಇದೆ. ಇಂದೂ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂಬಂತಾಗಿದೆ. ಬೆಲೆ ಏರಿಕೆಯ ಲಕ್ಷಣವಂತೂ ಕಂಡುಬರುತ್ತಿಲ್ಲ. ಇದು ರೈತರ ಚಿಂತೆಗೆ ಕಾರಣವಾಗಿದೆ. ಈ ವಾರವಾದರೂ ಅಡಿಕೆ ಬೆಲೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ. ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ. ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲೂ ವ್ಯತ್ಯಾಸವಾಗಿಲ್ಲ. ಇವೆರಡರ ದರ ಈಗ 275 ರೂ.ಗೆ ಬಂದು ತಲುಪಿದೆ.
ಕಾಳುಮೆಣಸು, ಕೊಬ್ಬರಿ ದರ
ವಿಶೇಷವೆಂದರೆ ಕಾಳುಮೆಣಸು ದರದಲ್ಲೂ ಕಳೆದ ಕೆಲವು ದಿನಗಳಿಂದ ಯಾವುದೇ ವ್ಯತ್ಯಾಸಸವಾಗಿಲ್ಲ. ಇಂದು ಯಥಾಸ್ಥಿತಿಯಲ್ಲಿದ್ದು 640 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ 260 ರೂ.ಗಳಷ್ಟಿದೆ.