Webdunia - Bharat's app for daily news and videos

Install App

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Krishnaveni K
ಮಂಗಳವಾರ, 19 ಆಗಸ್ಟ್ 2025 (11:06 IST)
ಬೆಂಗಳೂರು: ಅಡಿಕೆ ಬೆಲೆ ಮಾತ್ರ ಏರಿಕೆಯಾಗುವ ಲಕ್ಷಣವೇ ಕಂಡುಬರುತ್ತಿಲ್ಲ. ಅತ್ತ ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದ್ದರೆ ಕೊಬ್ಬರಿ ಬೆಲೆ ಮಾತ್ರ ಮತ್ತೆ ಕೊಂಚ ಏರಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂಬಂತಾಗಿತ್ತು. ವಿಪರೀತ ಮಳೆಯಿಂದ ಕೊಳೆ ರೋಗದ ನಡುವೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲಿ ಮೊನ್ನೆ 5 ರೂ. ಏರಿಕೆಯಾಗಿತ್ತು. ಈಗ ಯಥಾಸ್ಥಿತಿಯಲ್ಲಿದ್ದು ಇಂದು ದರ 280 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದ್ದು 665 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು ಮತ್ತೆ 10 ರೂ. ಏರಿಕೆಯಾಗಿದ್ದು 240 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಮಕ್ಕಳಿಗೆ ಮೊಟ್ಟೆಗಿಂತ ಇದನ್ನು ಕೊಡೋದು ಬೆಸ್ಟ್

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಮುಂದಿನ ಸುದ್ದಿ
Show comments