Daily Horoscope

Select Your Language

Notifications

webdunia
webdunia
webdunia
webdunia

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Arecanut
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಅಡಿಕೆ ಬೆಲೆ ನಿಂತ ನೀರಾಗಿದೆ. ಅತ್ತ ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದ್ದು ಕೊಬ್ಬರಿ ಬೆಲೆಯೂ ಇಂದು ಕೊಂಚ ಏರಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂಬಂತಾಗಿತ್ತು. ವಿಪರೀತ ಮಳೆಯಿಂದ ಕೊಳೆ ರೋಗದ ನಡುವೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಹೊಸ ಅಡಿಕೆ ಬೆಲೆ ಕೆಲವು ದಿನಗಳಿಂದ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಹಲವು ದಿನಗಳಿಂಧ ಯಥಾ ಸ್ಥಿತಿಯಲ್ಲಿದೆ.  ಹಳೆ ಅಡಿಕೆ ಬೆಲೆ ಇಂದೂ ಗರಿಷ್ಠ 525 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 525 ರೂ.ಗಳಾಗಿವೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರದಲ್ಲಿ ಮೊನ್ನೆ 5 ರೂ. ಏರಿಕೆಯಾಗಿತ್ತು. ಈಗ ಯಥಾಸ್ಥಿತಿಯಲ್ಲಿದ್ದು ಇಂದು ದರ 280 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆಯಲ್ಲಿ ಕಳೆದ ವಾರ ಕೊಂಚ ಏರಿಕೆಯಾಗಿತ್ತು. ಇಂದು ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದ್ದು 665 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ 10 ರೂ. ಏರಿಕೆಯಾಗಿ 255 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ