Publish Date: Fri, 24 Oct 2025 (10:57 IST)
Updated Date: Fri, 24 Oct 2025 (11:00 IST)
ಬೆಂಗಳೂರು: ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ದಸರಾ ಬಳಿಕ ಅಡಿಕೆ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಕಂಡುಬಂದಿರಲಿಲ್ಲ. ಆದರೆ ಈಗ ದೀಪಾವಳಿ ನಂತರ ಅಡಿಕೆ ಬೆಳೆಗಾರರಿಗೆ ಬೆಲೆ ಏರಿಕೆ ಕೊಂಚ ಸಮಾಧಾನ ತಂದಿದೆ. ಹೊಸ ಅಡಿಕೆ ಬೆಲೆ 360 ರೂ.ಗಳಷ್ಟಿದೆ. ಅದರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಳೆ ಅಡಿಕೆ ಬೆಲೆಯೂ ಇಂದು 510 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಕೊಂಚ ಏರಿಕೆಯಾಗಿದೆ. ಹೊಸ ಪಟೋರ ದರ 300 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 400 ರೂ.ಗಳಷ್ಟಿದೆ. ಹೊಸ ಉಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಹೊಸ ಉಳ್ಳಿ ದರ 200 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 255 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಇದೀಗ 675 ರೂ.ಗಳಷ್ಟಾಗಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು 245 ರೂ.ಗಳಷ್ಟಾಗಿದೆ.