Publish Date: Tue, 11 Nov 2025 (13:57 IST)
Updated Date: Tue, 11 Nov 2025 (13:59 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ವಾರ ಒಮ್ಮೆ ಅಡಿಕೆ ಬೆಲೆ ಹೆಚ್ಚಳವಾಗಿತ್ತು. ಆದರೆ ಮತ್ತೆ ಈಗ ಕೆಲವು ದಿನಗಳಿಂದ ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ ಎಂಬ ಸ್ಥಿತಿಯಾಗಿದೆ. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಇಂದು ಹೊಸ ಅಡಿಕೆ ಬೆಲೆ 370 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆಯೂ ಇಂದು 520 ರೂ. ಗಳಷ್ಟೇ ಇದೆ. ಇನ್ನು ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು 535 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೊಸ ಪಟೋರ ದರ ಯಥಾಸ್ಥಿತಿಯಲ್ಲಿದ್ದು 310 ರೂ. ಗಳಷ್ಟಿದ್ದರೆ ಹಳೇ ಪಟೋರ ದರ ಯಥಾಸ್ಥಿತಿಯಲ್ಲಿದ್ದು 400 ರೂ.ಗಳಷ್ಟಿದೆ. ಹೊಸ ಉಳ್ಳಿ ದರದಲ್ಲಿ ಯಥಾಸ್ಥಿತಿಯಲ್ಲಿದ್ದು ಇಂದೂ 200 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ ಯಥಾಸ್ಥಿತಿಯಲ್ಲಿದ್ದು 250 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಯಥಾಸ್ಥಿತಿಯಲ್ಲಿದ್ದು ಇದೀಗ 650 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು 245 ರೂ.ಗಳಷ್ಟಾಗಿದೆ.