Publish Date: Mon, 17 Nov 2025 (11:17 IST)
Updated Date: Mon, 17 Nov 2025 (11:19 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇದೀಗ ಅಡಿಕೆ ಬೆಲೆ ಕೊಂಚ ಚೇತರಿಕೆ ಕಂಡಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಹೊಸ ಅಡಿಕೆ ಬೆಲೆ ಏರಿಕೆಯಾಗಿ 390 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಇಂದು 530 ರೂ. ಗಳಷ್ಟಾಗಿದೆ. ಇನ್ನು ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು 540 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೊಸ ಪಟೋರ ದರ ಯಥಾಸ್ಥಿತಿಯಲ್ಲಿದ್ದು 310 ರೂ. ಗಳಷ್ಟಿದ್ದರೆ ಹಳೇ ಪಟೋರ ದರ ಯಥಾಸ್ಥಿತಿಯಲ್ಲಿದ್ದು 400 ರೂ.ಗಳಷ್ಟಿದೆ. ಹೊಸ ಉಳ್ಳಿ ದರದಲ್ಲಿ 10 ರೂ. ಏರಿಕೆಯಾಗಿ ಇಂದೂ 215 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ ಯಥಾಸ್ಥಿತಿಯಲ್ಲಿದ್ದು 260 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ. ಏರಿಕೆಯಾಗಿ 660 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು 245 ರೂ.ಗಳಷ್ಟಾಗಿದೆ.