Publish Date: Fri, 21 Nov 2025 (12:44 IST)
Updated Date: Fri, 21 Nov 2025 (12:46 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಆದರೆ ಕಾಳುಮೆಣಸು ದರ ಮಾತ್ರವೇ ಕೊಂಚವೇ ಏರಿಕೆಯಾಗುತ್ತಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಆದರೆ ಮೊನ್ನೆ ಅಡಿಕೆ ಬೆಲೆ ದಿಡೀರ್ ಏರಿಕೆಯಾಗಿದೆ. ಆದರೆ ಈಗ ಮತ್ತೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 400 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಮಾತ್ರ ಯಥಾಸ್ಥಿತಿಯಲ್ಲಿದ್ದು ಇಂದು 530 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು 540 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಪಟೋರ ದರ 330 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 410 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದೂ 225 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ ಯಥಾಸ್ಥಿತಿಯಲ್ಲಿದ್ದು 270 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ. ಏರಿಕೆಯಾಗಿ 670 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು 245 ರೂ.ಗಳಷ್ಟಾಗಿದೆ.