Daily Horoscope

Select Your Language

Notifications

webdunia
webdunia
webdunia
webdunia

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Arecanut price today
ಬೆಂಗಳೂರು: ಅಡಿಕೆ ಬೆಲೆ ಕಳೆದ ಮೊನ್ನೆಯಷ್ಟೇ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಅಡಿಕೆ ಮತ್ತು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಅಡಿಕೆ ಬೆಲೆ ದಿಡೀರ್ ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ.  ಹೊಸ ಅಡಿಕೆ ಬೆಲೆ  410 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು ಇಂದು 530 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು  540 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಇಂದು ಯಾವುದೇ ವ್ಯತ್ಯಾಸವಿಲ್ಲ. ಹೊಸ ಪಟೋರ ದರ 340 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 415 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದೂ 225 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ ಯಥಾಸ್ಥಿತಿಯಲ್ಲಿದ್ದು 270 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು  670 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು  235 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ