Publish Date: Sat, 20 Dec 2025 (14:45 IST)
Updated Date: Sat, 20 Dec 2025 (14:46 IST)
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅದೇ ಬೆಲೆ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಇದರ ನಡುವೆ ಮೊನ್ನೆ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 415 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 520 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆ 535 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲೂ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ ದರ 350 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 390 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು 225 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 260 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ. ಏರಿಕೆಯಾಗಿದ್ದು 665 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು 225 ರೂ.ಗಳಷ್ಟಾಗಿದೆ.