Daily Horoscope

Select Your Language

Notifications

webdunia
webdunia
webdunia
webdunia

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Arecanut
ಬೆಂಗಳೂರು: ಅಡಿಕೆ ಬೆಲೆ ಒಂದು ವಾರದಿಂದ ಯಥಾಸ್ಥಿತಿಯಲ್ಲಿತ್ತು. ಇಂದು ಕೊಂಚ ದರ ಏರಿಕೆಯಾಗಿರುವುದು ಸಮಾಧಾನ ತಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿದೆ. ಅಡಿಕೆ ಬೆಲೆ ಇಳಿಕೆಯಾಗುತ್ತಿದೆಯೇ ಹೊರತು ಏರಿಕೆಯಾಗುತ್ತಿಲ್ಲ ಎಂಬ ಚಿಂತೆ ಬೆಳೆಗಾರರದ್ದು. ಆದರೆ ಇಂದು ಹೊಸ ಅಡಿಕೆ ಬೆಲೆ 10 ರೂ.ಗಳಷ್ಟು ಏರಿಕೆಯಾಗಿದ್ದು 425 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 525 ರೂ. ಗಳಷ್ಟಿದೆ. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 530 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಇಂದು ಕೊಂಚ ಏರಿಕೆಯಾಗಿದೆ. ಹೊಸ ಪಟೋರ ದರ 10 ರೂ. ಏರಿಕೆಯಾಗಿದ್ದು 365 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 10 ರೂ. ಏರಿಕೆಯಾಗಿದ್ದು 405 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  ಯಥಾಸ್ಥಿತಿಯಲ್ಲಿದ್ದು 230 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 5 ರೂ. ಏರಿಕೆಯಾಗಿ 265 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು  675 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು  225 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬದಲಾವಣೆ ಬಗ್ಗೆ ಹೊಸ ವರ್ಷದ ಹೊಸ್ತಿಲಲ್ಲೇ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್