Publish Date: Sat, 10 Jan 2026 (11:37 IST)
Updated Date: Sat, 10 Jan 2026 (11:38 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದೆ. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಅಡಿಕೆ ಬೆಲೆ ಇಂದು ಸತತ ಐದನೇ ದಿನ ಏರಿಕೆಯಾಗಿರುವುದು ರೈತರ ಸಂತಸಕ್ಕೆ ಕಾರಣವಾಗಿದೆ. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಯಾವುದೇ ಏರಿಕೆ, ಇಳಿಕೆಯಾಗಿಲ್ಲ. ಹೊಸ ಪಟೋರ 390 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 415 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದ್ದು 250 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ ಯಥಾಸ್ಥಿತಿಯಲ್ಲಿದ್ದು 280 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ. ಯಥಾಸ್ಥಿತಿಯಲ್ಲಿದ್ದು 660 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು 225 ರೂ.ಗಳಷ್ಟಾಗಿದೆ.