Publish Date: Mon, 23 Feb 2026 (12:26 IST)
Updated Date: Mon, 23 Feb 2026 (12:28 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ನಿನ್ನೆ ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಇದು ಬೆಳೆಗಾರರಿಗೆ ಸಮಾಧಾನ ತಂದಿತ್ತು. ಮತ್ತೆ ಅಡಿಕೆ ಬೆಲೆಯಲ್ಲಿ ಚೇತರಿಕೆ ಕಂಡುಬರುತ್ತಿದೆ. ಆದರೆ ಇಂದು ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಹೊಸ ಅಡಿಕೆ ಬೆಲೆ 485 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 10 ರೂ. ಇಳಿಕೆಯಾಗಿದ್ದು 540 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 10 ರೂ. ಇಳಿಕೆಯಾಗಿದ್ದು 540 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಾವುದೇ ಏರಿಕೆ, ಇಳಿಕೆಯಾಗಿಲ್ಲ. ಹೊಸ ಪಟೋರ 415 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 430 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದ್ದು 300 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 305 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 665 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು 210 ರೂ.ಗಳಷ್ಟಾಗಿದೆ.