Daily Horoscope

Select Your Language

Notifications

webdunia
webdunia
webdunia
webdunia

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Arecanut price today
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಆದರೆ ನಿನ್ನೆ ಭರ್ಜರಿ ಏರಿಕೆಯಾಗಿತ್ತು. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಇದು ಬೆಳೆಗಾರರಿಗೆ ಆತಂಕ ತಂದಿತ್ತು. ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿತ್ತು. ಆದರೆ ಇಂದು ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ನಿನ್ನೆ ಮತ್ತೆ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಹೊಸ ಅಡಿಕೆ ಬೆಲೆ 470 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 540 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 540 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 390 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 405 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  ಯಥಾಸ್ಥಿತಿಯಲ್ಲಿದ್ದು 285 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ 285 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 655 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆಯೂ ಇಂದು ಯಥಾಸ್ಥಿತಿ ಕಾಯ್ದುಕೊಂಡಿದ್ದು 165 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರಪ್ರದೇಶದ ಮಾರ್ಕಪುರಂನಲ್ಲಿ ಭೀಕರ ಬಸ್ ದುರಂತ: 10 ಜನ ಸುಟ್ಟು ಕರಕಲು, ಭೀಕರ ಇಲ್ಲಿದೆ Video