Publish Date: Sat, 28 Mar 2026 (12:11 IST)
Updated Date: Sat, 28 Mar 2026 (12:13 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ವಾರದ ಆರಂಭದಲ್ಲೇ ಅಡಿಕೆ ಬೆಲೆ ಕೊಂಚ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಭರ್ಜರಿ ಏರಿಕೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿತ್ತು. ಇದು ಬೆಳೆಗಾರರಿಗೆ ಆತಂಕ ತಂದಿತ್ತು. ಕಳೆದ ಕೆಲವು ದಿನಗಳಿಂದ ಸತತವಾಗಿ ಬೆಲೆ ಇಳಿಕೆ ಕಂಡುಬರುತ್ತಿತ್ತು. ಆದರೆ ಇಂದು ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ಇಂದು ಹೊಸ ಅಡಿಕೆ ಬೆಲೆ 5 ರೂ. ಏರಿಕೆಯಾಗಿದ್ದು 480 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 5 ರೂ. ಏರಿಕೆಯಾಗಿದ್ದು 550 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 5 ರೂ. ಏರಿಕೆಯಾಗಿದ್ದು 550 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 390 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 405 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದ್ದು 285 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ 285 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 655 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆಯೂ ಇಂದು ಯಥಾಸ್ಥಿತಿ ಕಾಯ್ದುಕೊಂಡಿದ್ದು 165 ರೂ.ಗಳಷ್ಟಾಗಿದೆ.