Publish Date: Tue, 14 Apr 2026 (11:23 IST)
Updated Date: Tue, 14 Apr 2026 (11:25 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಮೊನ್ನೆ ಕೊಂಚ ಇಳಿಕೆಯಾಗಿತ್ತು. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ 555 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 555 ರೂ.ಗಳಷ್ಟಾಗಿದೆ.
ಹೊಸ ಪಟೋರ ದರ ಮತ್ತು ಹಳೆ ಪಟೋರ ದರದಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 400 ರೂ. ಗಳಷ್ಟಿದ್ದರೆ ಹಳೇ ಪಟೋರ 410 ರೂ.ಗಳಷ್ಟಿದೆ. ಹೊಸ ಉಳ್ಳಿ ದರ ಇಂದು 290 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ 290 ರೂ.ಗಳಾಗಿದೆ.
ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು 690 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು 190 ರೂ.ಗಳಷ್ಟಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ