Daily Horoscope

Select Your Language

Notifications

webdunia
webdunia
webdunia
webdunia

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Arecanut Price Today
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಕೆ-ಇಳಿಕೆಯಾಗಿತ್ತು. ಕಳೆದ ವಾರದಂತೆ ಈ ವಾರವೂ ಅದೇ ಟ್ರೆಂಡ್ ಮುಂದುವರಿದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಳಿಕೆಯಾಗುತ್ತಲೇ ಇತ್ತು. ಕಳೆದ ವಾರ ಎರಡು ದಿನ ಸತತವಾಗಿ ಬೆಲೆ ಏರಿಕೆ ಕಂಡುಬರುತ್ತಿತ್ತು. ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದೆ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು 540 ರೂ. ಗಳಾಗಿದೆ. ಡಬಲ್ ಚೋಲ್ ಬೆಲೆಯೂ 540 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ಇಂದು ಇಳಿಕೆ ಯಥಾಸ್ಥಿತಿಯಲ್ಲಿದೆ. ಹೊಸ ಪಟೋರ 395 ರೂ. ಗಳಷ್ಟಿದ್ದರೆ ಹಳೇ ಪಟೋರ 395 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು 295 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 295 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಇಂದು 675 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು ಯಥಾಸ್ಥಿತಿಯಲ್ಲಿದ್ದು 152 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ