Select Your Language

Notifications

webdunia
webdunia
webdunia
webdunia

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

Arecanut
ಬೆಂಗಳೂರು: ಸತತ ಏರುಗತಿಯಲ್ಲಿದ್ದ ಅಡಿಕೆ ಬೆಲೆ ಕಳೆದ ಒಂದು ವಾರದಿಂದ ಸ್ಥಿರವಾಗಿದೆ. ಇದರಿಂದ ಏರಿಕೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಕೊಂಚ ನಿರಾಸೆಯಾಗಿದೆ. ಇಂದೂ ಕೂಡಾ ಮಾರುಕಟ್ಟೆಯಲ್ಲಿ ಅಡಿಕೆ, ಕಾಳುಮೆಣಸು ಮತ್ತು ಕೊಬ್ಬರಿ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ.

ಇತ್ತೀಚೆಗೆ ಮುಂಗಾರು ಪೂರ್ವ ಮಳೆಯಿಂದಾಗಿ ಅಡಿಕೆ ಬೆಳೆಗಾರರು ಬೆಳೆ ಹಾನಿ ಚಿಂತೆಯಲ್ಲಿದ್ದಾರೆ. ಅದರ ನಡುವೆ ಈಗ ಬೆಲೆ ಏರಿಕೆಯೂ ಕಾಣದೇ ಇರುವುದು ಚಿಂತೆ ಹೆಚ್ಚಿಸಿದೆ. ಆದರೆ ಹಾಗಂತ ಕಡಿಮೆಯೂ ಆಗಿಲ್ಲ ಎನ್ನುವುದು ಗಮನಾರ್ಹ. ಇಂದಿನ ಮಾರುಕಟ್ಟೆ ದರ ಹೇಗಿದೆ ಇಲ್ಲಿದೆ ವಿವರ.

ಹೊಸ ಅಡಿಕೆಗೆ ನಿನ್ನೆ ಮಾರುಕಟ್ಟೆಯಲ್ಲಿ ಪ್ರತೀ ಕೆ.ಜಿ.ಗೆ ಗರಿಷ್ಠ 400 ರೂ.ಗಳಷ್ಟಿತ್ತು. ಇದು ಇಂದೂ ಮುಂದುವರಿದಿದೆ. ಫ್ರೆಶ್ ಚೋಲ್ ಅಡಿಕೆಗೆ ಗರಿಷ್ಠ 455 ರಷ್ಟಿತ್ತು. ಅದೀಗ 460 ರೂ.ಗೆ ತಲುಪಿದೆ. ಡಬಲ್ ಚೋಲ್ ಅಡಿಕೆಗೆ 495 ರೂ.ಗಳಷ್ಟು ದರವಿತ್ತು. ಇಂದೂ ಅದೇ ದರ ಮುಂದುವರಿದಿದೆ. ಇಂದಿನ ಮಾರುಕಟ್ಟೆ ಪ್ರಕಾರ ಈ ದರಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಕಾಳುಮೆಣಸು ದರ
ಕಾಳುಮೆಣಸಿನ ಬೆಲೆಯಲ್ಲೂ ಯಾವುದೇ ಹೆಚ್ಚು-ಕಡಿಮೆಯಾಗಿಲ್ಲ. ಕಳೆದ ಒಂದು ವಾರದಿಂದ ಯಥಾಸ್ಥಿತಿಯಲ್ಲಿದೆ. ಕಾಳುಮೆಣಸಿಗೆ ನಿನ್ನೆ ಗರಿಷ್ಠ 680 ರೂ.ಗಳಷ್ಟಿತ್ತು. ಕಳೆದ ಕೆಲವು ದಿನಗಳಿಂದ ಇದೇ ಬೆಲೆಯಿದೆ. ಇಂದು ಕೂಡಾ ಅದೇ ದರ ಮುಂದುವರಿದಿದೆ. ಒಣಕೊಬ್ಬರಿ ಬೆಲೆಯಲ್ಲಿ ಮಾತ್ರ ಕೊಂಚ ಏರಿಕೆಯಾಗಿದ್ದು ಇದೀಗ ಗರಿಷ್ಠ 165 ರೂ.ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price today: ಚಿನ್ನ ಖರೀದಿಸುವರಿಗೆ ಸಿಹಿ ಸುದ್ದಿ, ಇಂದೂ ಬೆಲೆ ಇಳಿಕೆ: ಇಲ್ಲಿದೆ ಬೆಲೆ ವಿವರ