Publish Date: Wed, 21 May 2025 (11:49 IST)
Updated Date: Wed, 21 May 2025 (11:51 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ನಿಂತ ನೀರಾಗಿದೆ. ಇಂದೂ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರಿಗೆ ನಿರಾಸೆಯಾಗಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.
ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ಅಡಿಕೆ ಬೆಳೆಗಾರರಿಗೆ ನಿರಾಶೆಯಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟೇ ಇದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 490 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 490 ರೂ.ಗಳಷ್ಟೇ ಇದೆ.
ಉಳಿದಂತೆ ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲೂ ವ್ಯತ್ಯಾಸವಾಗಿಲ್ಲ. ಹೊಸ ಫಟೋರ ದರ 370 ರೂ.ಗಳಷ್ಟಿದೆ. ಹಳೆ ಫಟೋರ ದರ 375 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ 305 ರೂ.ಆಗಿದೆ. ಹಳೇ ಕೋಕ ದರವೂ 305 ರೂ. ಗಳಷ್ಟೇ ಇದೆ.
ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು. ಆದರೆ ಇಂದು ಕಾಳುಮೆಣಸು ದರವೂ ಯಥಾಸ್ಥಿತಿಯಲ್ಲಿದ್ದು 670 ರೂ.ಗಳಷ್ಟೇ ಇದೆ. ಇನ್ನು ಒಣಕೊಬ್ಬರಿ ಬೆಲೆ ಏರಿಕೆಯಾಗಿದ್ದು ಗರಿಷ್ಠ 190 ರೂ.ಗಳಷ್ಟಾಗಿದೆ.