Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

Krishnaveni K
ಶನಿವಾರ, 17 ಮೇ 2025 (14:27 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆ-ಇಳಿಕೆಯ ನಡುವೆ ಉಯ್ಯಾಲೆಯಾಡುತ್ತಿತ್ತು. ಆದರೆ ಇಂದು ಎಲ್ಲಾ ವರ್ಗದ ಅಡಿಕೆ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ಎರಡು ದಿನಗಳ ಹಿಂದೆ ಅಡಿಕೆ ಬೆಲೆ ಕೊಂಚವೇ ಇಳಿಕೆಯಾಗಿ ಗ್ರಾಹಕರಿಗೆ ನಿರಾಸೆಯಾಗಿತ್ತು. ಆದರೆ ಇಂದು ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟೇ ಇದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 490 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆಯಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಇಂದೂ 490 ರೂ.ಗಳಷ್ಟೇ ಇದೆ.

ಉಳಿದಂತೆ ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲೂ ವ್ಯತ್ಯಾಸವಾಗಿಲ್ಲ. ಹೊಸ ಫಟೋರ ದರ 370 ರೂ.ಗಳಷ್ಟಿದೆ. ಹಳೆ ಫಟೋರ ದರ 375 ರೂ.ಗಳಷ್ಟೇ ಇದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಇಂದೂ ಅದೇ ರೀತಿ ಮುಂದುವರಿದಿದೆ. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ 5 ರೂ. ಏರಿಕೆಯಾಗಿದ್ದ 305 ರೂ.ಆಗಿದೆ. ಹಳೇ ಕೋಕ 5 ರೂ. ಏರಿಕೆಯಾಗಿ 305 ರೂ. ಗಳಷ್ಟೇ ಇದೆ.

ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು.  ನಿನ್ನೆ ಕಾಳುಮೆಣಸು ದರ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು 20 ರೂ. ಏರಿಕೆಯಾಗಿದ್ದು 670 ರೂ.ಗಳಷ್ಟೇ ಇದೆ. ಇನ್ನು ಒಣಕೊಬ್ಬರಿ ಗರಿಷ್ಠ 182 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments