Webdunia - Bharat's app for daily news and videos

Install App

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Krishnaveni K
ಗುರುವಾರ, 19 ಜೂನ್ 2025 (11:56 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆ ಏರಿಕೆ ನಿರೀಕ್ಷೆಯಲ್ಲಿರುವ ರೈತರಿಗೆ ನಿರಾಸೆಯಾಗಿತ್ತು. ಆದರೆ ಇಂದು ಬೆಳೆಗಾರರು ಕೊಂಚ ಮಟ್ಟಿಗೆ ಸಮಾಧಾನಪಡುವ ಸುದ್ದಿ ಬಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಆರಂಭದಲ್ಲೇ ಅಡಿಕೆ ಬೆಲೆ ಇಳಿಕೆಯಾಗಿತ್ತು. ಇದಾದ ಬಳಿಕ ಬೆಲೆ ಏರಿಕೆಯೂ ಆಗಿಲ್ಲ, ಇಳಿಕೆಯೂ ಆಗಿಲ್ಲ. ಅಡಿಕೆ ಬೆಲೆ ಯಥಾಸ್ಥಿತಿಯಲ್ಲೇ ಮುಂದುವರಿದಿದೆ. ಈ ವಾರದ ಆರಂಭದಿಂದಲೂ ಅದೇ ಪರಿಸ್ಥಿತಿಯಿದೆ. ಅಡಿಕೆ ಬೆಲೆಯಲ್ಲಿ ಇಂದೂ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ  475 ರೂ.ಗಳಷ್ಟೇ ಇದೆ. ಹಳೆ ಅಡಿಕೆ ಬೆಲೆಯೂ ಏರಿಕೆ-ಇಳಿಕೆಯಾಗದೇ ಗರಿಷ್ಠ 520 ರೂ.ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿ ಕಾಪಾಡಿಕೊಂಡಿದ್ದು 520 ರೂ.ಗಳಾಗಿವೆ.

ಆದರೆ ಹೊಸ ಪಟೋರ ಮತ್ತು ಹಳೆ ಪಟೋರ ದರದಲ್ಲಿ ಕೊಂಚ ಏರಿಕೆಯಾಗಿದೆ. ನಿನ್ನೆ ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ತಲಾ 360 ರೂ.ಗಳಷ್ಟಿತ್ತು. ಇಂದು ಎರಡೂ ತಲಾ 365 ರೂ.ಗಳಾಗಿವೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು.  ಆದರೆ ಇಂದು ಕೊಂಚ ಇಳಿಕೆಯಾಗಿದೆ. ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 5 ರೂ.ಗಳಷ್ಟು ಇಳಿಕೆಯಾಗಿದ್ದು 250 ರೂ.ಗಳಾಗಿವೆ. ಹೊಸ ಕೋಕ ಮತ್ತು ಹಳೆ ಕೋಕ ದರವೂ ವ್ಯತ್ಯಾಸವಾಗಿಲ್ಲ. ಇಂದೂ ತಲಾ 310 ರೂ.ಆಗಿದೆ.
ಕಾಳುಮೆಣಸು ದರ
ನಿನ್ನೆ ಕಾಳುಮೆಣಸು ದರದಲ್ಲಿಏರಿಕೆಯಾಗದೇ ಇದ್ದರೂ ಇಳಿಕೆಯಾಗಿಲ್ಲ ಎನ್ನುವುದೇ ಸಮಾಧಾನಕರ ವಿಚಾರವಾಗಿತ್ತು. ಆದರೆ ಇಂದು ಮತ್ತೆ 5 ರೂ. ಕುಸಿತವಾಗಿದೆ. ಇಂದು 640 ರೂ.ಗಳಷ್ಟಿವೆ. ಇನ್ನು ಒಣಕೊಬ್ಬರಿ ಬೆಲೆ ಕಳೆದ ವಾರ ಏರಿಕೆಯಾಗಿತ್ತು. ಈಗಲೂ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಇಂದೂ  235 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಮುಂದಿನ ಸುದ್ದಿ
Show comments