Publish Date: Fri, 09 May 2025 (12:15 IST)
Updated Date: Fri, 09 May 2025 (12:16 IST)
ಬೆಂಗಳೂರು: ನಿನ್ನೆ ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಉಳಿದ ವರ್ಗದ ಅಡಿಕೆ ಯಥಾಸ್ಥಿತಿಯಲ್ಲಿದೆ. ಆದರೆ ಇಂದು ಎಲ್ಲವೂ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ ಹೇಗಿದೆ ಇಲ್ಲಿದೆ ವಿವರ.
ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿತ್ತು. ಆದರೆ ನಿನ್ನೆ ಅಡಿಕೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿ ರೈತರಿಗೆ ನಿರಾಸೆಯಾಗಿತ್ತು. ಆದರೆ ಇಂದು ಹೊಸ ಅಡಿಕೆ ಮತ್ತು ಹಳೆ ಅಡಿಕೆ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದ್ದರೆ ಹಳೆ ಅಡಿಕೆ ಬೆಲೆ ಗರಿಷ್ಠ 500 ರೂ.ಗಳಷ್ಟಿದೆ. ಇಂದು ಡಬಲ್ ಚೋಲ್ ಬೆಲೆ ಗರಿಷ್ಠ 510 ರೂ.ಗಳಷ್ಟಿದೆ.
ಪಟೋರ ಮತ್ತು ಇತರೆ ಅಡಿಕೆ ಬೆಲೆಯಲ್ಲಿ ಹೆಚ್ಚು ಕಡಿಮೆಯಾಗಿಲ್ಲ. ಹೊಸ ಫಟೋರ ದರ ಇಂದು 360 ರೂ.ಗಳಷ್ಟಿದೆ. ಹಳೆ ಫಟೋರ ದರ 370 ರೂ. ಗಳಷ್ಟಾಗಿದೆ. ಹೊಸ ಉಳ್ಳಿ ದರ ಕಳೆದ ಕೆಲವು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಹೊಸ ಉಳ್ಳಿಗೆ ಗರಿಷ್ಠ 250 ರೂ., ಹಳೆ ಉಳ್ಳಿ ದರವೂ 250 ರೂ.ಗೆ ಗಳಷ್ಟಿದೆ. ಹೊಸ ಕೋಕ ದರವೂ ಯಥಾಸ್ಥಿತಿಯ್ಲಿದ್ದು 300 ರೂ.ಆಗಿದೆ. ಹಳೇ ಕೋಕ 300 ರೂ. ಗಳಷ್ಟೇ ಇದೆ.
ಕಾಳುಮೆಣಸು ದರ
ಕಾಳುಮೆಣಸು ಬೆಳೆಗಾರರಿಗೆ ಕಳೆದ ವಾರ ಸತತವಾಗಿ ಬೆಲೆ ಇಳಿಕೆಯಾಗಿ ನಿರಾಸೆಯಾಗಿತ್ತು. ಇಂದು ಕಾಳುಮೆಣಸು ದರ 665 ರೂ.ಗಳಷ್ಟಕ್ಕೆ ಇಳಿಕೆಯಾಗಿದೆ. ಇನ್ನು ಒಣಕೊಬ್ಬರಿ ಬಹಳ ದಿನಗಳ ನಂತರ ಏರಿಕೆಯಾಗಿದ್ದು ಗರಿಷ್ಠ 180 ರೂ.ಗಳಷ್ಟಾಗಿದೆ.