ಬಿಲಿಯನೇರ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಕೇಶ್ ಅಂಬಾನಿ ದೊಡ್ಡ ಬ್ಯುಸಿನೆಸ್ ಮ್ಯಾನ್ ಆಗಿದ್ದು, ಅವರ ಕೆಲವೊಂದು ವಿಷಯಗಳು ನಿಗೂಢವಾಗಿರುತ್ತೆ.ಆದ್ರೆ ಇದೀಗ ಅವರಿಗೆ ಕೊಲೆ ಬೆದರಿಕೆ ಬಂದಿರುವುದು ಹಣಕ್ಕೆ ಬೇಡಿಕೆ ಇಟ್ಟಿರುವುದು ಪೊಲೀಸರ ಗಮನಕ್ಕೆ ಬಂದಿದೆ.
ನಿಗೂಢವಾಗಿ ಇಮೇಲ್ ಕಳುಹಿಸಿದ ವ್ಯಕ್ತಿ ಮುಕೇಶ್ ಅಂಬಾನಿ, ಇಮೇಲ್ ವಿಳಾಸಕ್ಕೆ 20 ಕೋಟಿ ಪಾವತಿಸದಿದ್ದರೆ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಕ್ಟೋಬರ್ 27ರಂದು ಶಾದಾಬ್ ಖಾನ್ ಎಂಬ ವ್ಯಕ್ತಿಯಿಂದ ಸಂಧೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.