Select Your Language

Notifications

webdunia
webdunia
webdunia
webdunia

ಕಲಬುರಗಿ ಏರ್‌ಪೋರ್ಟ್‌ ಬಾಕಿ ಕಾಮಗಾರಿಗೆ ಸಚಿವ ಸಂಪುಟ ಅಸ್ತು

ಕಲಬುರಗಿ ಏರ್‌ಪೋರ್ಟ್‌ ಬಾಕಿ ಕಾಮಗಾರಿಗೆ ಸಚಿವ ಸಂಪುಟ ಅಸ್ತು
ಬೆಂಗಳೂರು , ಬುಧವಾರ, 19 ಏಪ್ರಿಲ್ 2017 (19:05 IST)
ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 29 ಕೋಟಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ ಕೆಲ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣದ ಬಾಕಿ ಕಾಮಗಾರಿ ಪೂರ್ಣಗೊಳಿಸುವಂತೆ ಸರಕಾರದ ಮೇಲೆ ಭಾರಿ ಒತ್ತಡ ಎದುರಾದ ಹಿನ್ನೆಲೆಯಲ್ಲಿ, ಇದೀಗ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
 
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲ ವಿಷಯಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಹಾಕಿದ ಮತ ಯಾರಿಗೆ ಹೋಗಿದೆ ಎಂದು ಸ್ಥಳದಲ್ಲೇ ಖಚಿತಪಡಿಸಿಕೊಳ್ಳಬಹುದು.. ವಿವಿಪ್ಯಾಟ್ ಮೆಶಿನ್`ಗಳಿಗೆ ಕೇಂದ್ರ ಸಂಪುಟ ಅಸ್ತು