Webdunia - Bharat's app for daily news and videos

Install App

ಆಹಾರ ಪದಾರ್ಥಗಳ ದರ ಗಗನಕ್ಕೆ : ಮೇ 21ರಂದು ಕೇಂದ್ರ, ರಾಜ್ಯಗಳ ಸಭೆ

Webdunia
ಶುಕ್ರವಾರ, 20 ಮೇ 2016 (17:50 IST)
ಆಹಾರ ಪದಾರ್ಥಗಳು, ಬೇಳೆಕಾಳುಗಳು ಮತ್ತಿತರ ಅವಶ್ಯಕ ವಸ್ತುಗಳ ದರ ಗಗನಕ್ಕೇರುತ್ತಿದೆ. ಜನಸಾಮಾನ್ಯರಿಗೆ ಇದರ ಬಿಸಿ ತಟ್ಟುತ್ತಿದ್ದು, ದರಗಳ ಏರಿಕೆಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ  ಬೇಳೆಕಾಳುಗಳು ಮತ್ತಿತರ ಅವಶ್ಯಕ ವಸ್ತುಗಳ ದರ ಏರಿಕೆಯನ್ನು ಜಂಟಿಯಾಗಿ ನಿಭಾಯಿಸಲು  ಮೇ 21ರಂದು ರಾಜ್ಯ ಆಹಾರ ಸಚಿವರ ಸಭೆಯನ್ನು ಕರೆದಿದೆ.

ಇಡೀ ದಿನ ನಡೆಯುವ ಸಭೆಯಲ್ಲಿ ಆಹಾರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಮತ್ತು ವಾಣಿಜ್ಯ ಸಚಿವ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 
 ಸಭೆಯಲ್ಲಿ ಆಹಾರ ಪದಾರ್ಥಗಳ ದರ ಏರಿಕೆ ಹತೋಟಿಗೆ ತರುವ ಕಾರ್ಯಯೋಜನೆ, ದರ ನಿಗಾ ವ್ಯವಸ್ಥೆ ಬಲಪಡಿಸುವುದು, ಕಾಳಸಂತೆ ತಡೆಯಲು ಸಮನ್ವಯದ ಕಾರ್ಯತಂತ್ರ ಮತ್ತು ದರ ಸ್ಥಿರತೆಯ ನಿಧಿಯ ಬಳಕೆ ಕುರಿತು ಚರ್ಚಿಸಲಾಗುತ್ತದೆ. 
 ಬೇಳೆಕಾಳುಗಳ ದರ ದೇಶದ ಕೆಲವು ಭಾಗಗಳಲ್ಲಿ ಈಗಲೂ ಕೆಜಿಗೆ 190ರೂ.ಗೆ ಮಾರಾಟವಾಗುತ್ತಿದೆ.

ಕಳಪೆ ಮುಂಗಾರಿನಿಂದ ದೇಶೀಯ ಉತ್ಪಾದನೆಯಲ್ಲಿ ಕುಸಿತವಾಗಿದ್ದೇ ಬೇಳೆಕಾಳುಗಳ ದರ ಹೆಚ್ಚಳಕ್ಕೆ ಕಾರಣ. ಇದಲ್ಲದೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನುಷ್ಠಾನದ ಪುನರ್ಪರಿಶೀಲನೆ ನಡೆಸಲಿದೆ. ಇದನ್ನು 33 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments