Publish Date: Mon, 01 Jun 2026 (09:23 IST)
Updated Date: Mon, 01 Jun 2026 (09:26 IST)
ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ದೇಶಾದ್ಯಂತ ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇಂದಿನ ನಿಖರವಾದ ಹಾಗೂ ಪರಿಷ್ಕೃತ ದರಗಳ ವಿವರ ಇಲ್ಲಿದೆ
ತೈಲ ಮಾರುಕಟ್ಟೆ ಕಂಪನಿಗಳು ಇಂದಿನಿಂದ ಜಾರಿಗೆ ಬರುವಂತೆ ೧೯ ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 69 ರಿಂದ ₹72 ರವರೆಗೆ ಹೆಚ್ಚಳ ಮಾಡಿವೆ. ಕಳೆದ ಕೆಲವು ತಿಂಗಳುಗಳಿಂದ ಇಳಿಕೆಯಾಗುತ್ತಿದ್ದ ದರಗಳಿಗೆ ಬ್ರೇಕ್ ಬಿದ್ದಿದ್ದು, ಹೋಟೆಲ್ ಹಾಗೂ ವ್ಯಾಪಾರ ವಲಯಕ್ಕೆ ಇದು ದೊಡ್ಡ ಆಘಾತ ತಂದಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅದರ ದರಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ.
ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಏರಿಕೆ ಭೀತಿ: ವಾಣಿಜ್ಯ ಸಿಲಿಂಡರ್ ಬೆಲೆ ದಿಢೀರ್ ಹೆಚ್ಚಳವಾಗಿರುವುದರಿಂದ ಹೋಟೆಲ್‌ಗಳು, ಬೇಕರಿಗಳು, ರೆಸ್ಟೋರೆಂಟ್‌ಗಳು ಮತ್ತು ಕ್ಯಾಟರಿಂಗ್ ಉದ್ಯಮಗಳ ದೈನಂದಿನ ವೆಚ್ಚ ಗಣನೀಯವಾಗಿ ಹೆಚ್ಚಾಗಲಿದೆ. ಇದು ಮುಂಬರುವ ದಿನಗಳಲ್ಲಿ ಹೊರಗಿನ ತಿಂಡಿ-ತಿನಿಸುಗಳು ಮತ್ತು ಊಟದ ದರಗಳು ದುಬಾರಿಯಾಗಲು ಕಾರಣವಾಗಬಹುದು. ಸ್ಥಳೀಯ ತೆರಿಗೆ ಮತ್ತು ವ್ಯಾಟ್ (VAT) ಆಧಾರದ ಮೇಲೆ ಬೆಂಗಳೂರಿನಲ್ಲಿಯೂ ವಾಣಿಜ್ಯ ಸಿಲಿಂಡರ್ ಬೆಲೆ ಸರಿಸುಮಾರು ₹1850 ರ ಗಡಿ ದಾಟಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ