Select Your Language

Notifications

webdunia
webdunia
webdunia
webdunia

ಬರಗಾಲದಿಂದ 25,000 ಕೋಟಿಯಷ್ಟು ನಷ್ಟ

ಬರಗಾಲದಿಂದ 25,000 ಕೋಟಿಯಷ್ಟು ನಷ್ಟ
Bangalore , ಸೋಮವಾರ, 19 ಡಿಸೆಂಬರ್ 2016 (10:18 IST)
ಈ ವರ್ಷದ ಭೀಕರ ಬರಗಾಲದಿಂದ 25,000 ಕೋಟಿಯಷ್ಟು ನಷ್ಟವಾಗಿದೆ. ನಿಯಮಗಳ ಪ್ರಕಾರ 4702 ಕೋಟಿ ರೂ.ಗಳಷ್ಟು ಪರಿಹಾರವನ್ನು ಕೇಳಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರವಾಹದಿಂದ  386 ಕೋಟಿ ರೂ.ನಷ್ಟು ನಷ್ಟವಾಗಿದ್ದು ಕೇಂದ್ರಕ್ಕೆ ಈ ಪರಿಹಾರದ ಮೊತ್ತ ಕೇಳಿದ್ದೇವೆ. ಇದಲ್ಲದೆ, ರಾಜ್ಯ ಸರ್ಕಾರದಿಂದಲೂ ಬರ ನಿರ್ವಹಣೆಗಾಗಿ ಹಣ ಬಿಡುಗಡೆ ಮಾಡಿದ್ದೇವೆ ಎಂದರು. 
 
ಬರದ ಹಿನ್ನೆಯಲ್ಲಿ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಮುಖ್ಯಮಂತ್ರಿಗಳು ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಜನರಿಗೆ ಉದ್ಯೋಗ ಸಿಗಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. 
 
ಈ ಕೆಲಸ ಸಮಪ್ಪಕವಾಗಿ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಸಚಿವ ಸಂಪುಟದ 4 ಉಪ ಸಮಿತಿಗಳನ್ನು ರಚಿಸಿದ್ದೇನೆ. ಈ ಸಮಿತಿಗಳು ಪ್ರತಿ ಜಿಲ್ಲೆಗೂ ಭೇಟಿ ನೀಡಬೇಕು ಎಂದು ಸೂಚನೆ ನೀಡಿದ್ದೇನೆ. ಸಮಿತಿಯಲ್ಲಿರುವ ಸಚಿವರ ತಂಡಗಳು ಈಗಾಗಲೇ ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಂಜನಗೂಡು: ಕೆರೆ ತುಂಬಿಸುವ ಯೋಜನೆಗೆ ಸಿಎಂ ಶಿಲಾನ್ಯಾಸ