ಇಂದು ಕೂಡ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡಿಸೇಲ್ ಬೆಲೆ

ಗುರುವಾರ, 19 ಮಾರ್ಚ್ 2020 (10:04 IST)
ನವದೆಹಲಿ : ಇಲ್ಲಿಯವರೆಗೆ  ಇಳಿಕೆ ಕಂಡುಬಂದ ಪೆಟ್ರೋಲ್ ಹಾಗೂ  ಡೀಸೆಲ್ ಬೆಲೆಯಲ್ಲಿ ಇಂದು  ಸ್ಥಿರತೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.30ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 65.21 ರೂ. ಆಗಿದೆ.


ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 71.97ರೂ. ಹಾಗೂ ಡೀಸೆಲ್ ಬೆಲೆ 64.41 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 72.29ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.62 ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ