Webdunia - Bharat's app for daily news and videos

Install App

ಪ್ರತಿನಿತ್ಯ ರೈತರ ಖಾತೆಗಳಿಗೆ ರು.3.5 ಕೋಟಿ ಜಮೆಯಾಗುತ್ತಿದೆ

Webdunia
ಭಾನುವಾರ, 25 ಡಿಸೆಂಬರ್ 2016 (08:58 IST)
ವಾರ್ಷಿಕವಾಗಿ 1200 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಪ್ರತಿನಿತ್ಯ 3.5ಕೋಟಿ ರೂಪಾಯಿ ರೈತರ ಖಾತೆಗಳಿಗೆ ಜಮೆಯಾಗುತ್ತಿದೆ, ರೈತರು ಇನ್ನೂ ಎಷ್ಟೆ ಪ್ರಮಾಣದಲ್ಲಿ ಹಾಲು ಉತ್ಪಾದಿಸಿದರೂ ಸಹಾ ಸರ್ಕಾರ ಪ್ರೋತ್ಸಾಹ ಧನ ನೀಡಲು ಸಿದ್ದವಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.
 
ರಾಜ್ಯದಲ್ಲಿ ಪ್ರತಿನಿತ್ಯ 72 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಮೂಲಕ ದೇಶದಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಇರುವುದರಿಂದ ದಿನನಿತ್ಯ 2 ಲಕ್ಷ ಲೀಟರ್ ಕುಸಿತವಾಗಿ 70 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಧಾರವಾಡದ ಲಕಮನಹಳ್ಳಿ ಒಕ್ಕೂಟದ ಮುಖ್ಯ ಡೇರಿ ಆವರಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿ ಮುಖ್ಯಮಂತ್ರಿಗಳು ಮಾತನಾಡಿದರು.
 
ಹೈ-ಕ ಅಭಿವೃದ್ದಿಗೆ ವಾರ್ಷಿಕ 1 ಸಾವಿರ ಕೋಟಿ: ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 371ನೇ ಕಲಮಿನಡಿ ಪ್ರತಿ ವರ್ಷ 1ಸಾವಿರ ಕೋಟಿ ರೂಪಾಯಿಗಳನ್ನು ಅಭಿವೃದ್ದಿಗಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
 
ಒಟ್ಟು ಕರ್ನಾಟಕ ಅಭಿವೃದ್ದಿಯಾದರೆ ಮಾತ್ರ ರಾಜ್ಯದ ತಲಾವಾರು ಆದಾಯ ಹೆಚ್ಚಾಗುತ್ತದೆ, ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕನಿಷ್ಠ 1ಲಕ್ಷ ಕೋಟಿ ರೂಪಾಯಿ ಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಗೆ ಈ ಹಿಂದೆ 17ಸಾವಿರ ಕೋಟಿ ರೂ. ಸಾಕಾಗಿತ್ತು. ಈಗ ಭೂಸ್ವಾಧೀನ, ಪುನರ್ವಸತಿ ಸೇರಿ 55 ಸಾವಿರ ಕೋಟಿ ರೂಪಾಯಿಗಳಿಗೆ ಏರಿದೆ. ನಾವು ಅಧಿಕಾರಕ್ಕೆ ಬರುವಾಗ ವಾಗ್ದಾನ ಮಾಡಿದಂತೆ 50ಸಾವಿರ ಕೋಟಿ ರೂಪಾಯಿಗಳನ್ನು ನೀಡಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments