Publish Date: Tue, 26 Apr 2016 (19:27 IST)
Updated Date: Tue, 26 Apr 2016 (19:30 IST)
ನವದೆಹಲಿ: ಮುಂದಿನ ವರ್ಷ ಜನವರಿಯಿಂದ ಭಾರತದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್ ಫೋನ್ ಗಳಲ್ಲಿ ತುರ್ತು ಸಂದರ್ಭಕ್ಕೆ ಸಹಾಯಕವಾಗುವಂತೆ ಪ್ಯಾನಿಕ್ ಬಟನ್‌ನ್ನು ಅಳವಡಿಕೆ ಕಡ್ಡಾಯ ಎಂದು ಸರಕಾರ ಆದೇಶ ಹೊರಡಿಸಿದೆ.
2018 ರಿಂದ ಮಾರಾಟವಾಗುವ ಎಲ್ಲಾ ಮೊಬೈಲ್ ಪೋನ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ವ್ಯವಸ್ಥೆ ಮಾಡಬೇಕು. ಇದರಿಂದ ತುರ್ತುಸಂದರ್ಭಗಳಲ್ಲಿ ಮಹಿಳೆಯರ ಸುರಕ್ಷತೆಗೆ ನೆರವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಮಾನವನ ದೈನಂದಿನ ಜೀವನ ಉತ್ತಮ ಪಡಿಸಲು ತಂತ್ರಜ್ಞಾನ ಉಪಯೋಗವಾಗುತ್ತದೆ. ಅದರಲ್ಲೂ ಮಹಿಳೆಯರ ಸುರಕ್ಷತೆಗೆ ಹೆಚ್ಚು ಉಪಯೋಗವ ನಿಟ್ಟಿನಲ್ಲಿ ಮೊಬೈಲ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಟಿಲಿಕಾಂ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳು ಹ್ಯಾಂಡ್‌ಸೆಟ್‌ಗಳಲ್ಲಿ ಪ್ಯಾನಿಕ್ ಬಟನ್‌ನ್ನು ಬಳಕೆದಾರರಿಗೆ ಒದಗಿಸಬೇಕು ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳಲ್ಲಿ 5 ಮತ್ತು 9 ಸಂಖ್ಯೆಯನ್ನು ತುರ್ತು ಕರೆಗಳಿಗೆ ಬಳಕೆಯಾಗುವಂತೆ ವ್ಯವಸ್ಥೆಗೊಳಿಸಬೇಕು ಎಂದು ಸರಕಾರ ತನ್ನ ಪ್ರಸ್ತಾವನೆಯಲ್ಲಿ ತಿಳಿಸಿದೆ.
ಪವರ್ ಆನ್ ಮತ್ತು ಆಫ್ ಬಟನ್ ಗಳನ್ನು ಮೂರು ಬಾರಿ ಪ್ರೆಸ್ ಮಾಡಿದರೆ ತುರ್ತು ಸಂದೇಶ ರವಾನೆಯಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.