ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸತತ ಮೂರನೇ ದಿನವೂ ಕಡಿತ

ಶನಿವಾರ, 20 ಅಕ್ಟೋಬರ್ 2018 (10:06 IST)
ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಲು ತೆರಿಗೆ ಕಡಿತಗೊಳಿಸಿದ ಬೆನ್ನಲ್ಲೇ ಇದೀಗ ತೈಲ ಬೆಲೆಯಲ್ಲಿ ಕಡಿತಗೊಂಡಿದೆ.

ಮೊನ್ನೆಯಷ್ಟೇ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ತೈಲ ಕಂಪನಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದರು. ಅದರ ಬೆನ್ನಲ್ಲೇ ಇದೀಗ ಸತತ ಮೂರನೇ ದಿನ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲ್ ಪೆಟ್ರೋಲ್ ದರ ಕಡಿತಗೊಂಡಿರುವ ಹಿನ್ನಲೆಯಲ್ಲಿ ಈ ಇಳಿಕೆಯಾಗಿದೆ ಎನ್ನಲಾಗಿದೆ. ಇದೀಗ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ. 81.99 ರೂ. ಮತ್ತು ಡೀಸೆಲ್ ಬೆಲೆ 75.36 ರೂ.ಗೆ ಇಳಿಕೆಯಾಗಿದೆ. ಆಯಾ ಪ್ರದೇಶಗಳಿಗೆ ಅನುಗುಣವಾಗಿ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಡಿಕೆ ಶಿವಕುಮಾರ್ ಹೇಳಿಕೆಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ