ಬೆಂಗಳೂರು: ಚಿನ್ನದ ಬೆಲೆ ಇತ್ತೀಚೆಗಿನ ದಿನಗಳಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಲೇ ಇದೆ. ಇಂದಂತೂ ಪರಿಶುದ್ಧ ಚಿನ್ನದ ಬೆಲೆ ಇದ್ದಕ್ಕಿದ್ದಂತೆ ಭಾರೀ ಏರಿಕೆಯಾಗಿದೆ. ಆದರೆ ಇಂದು ಕೊಂಚ ಇಳಿಕೆಯಾಗಿದೆ ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.
ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ನಿನ್ನೆ ಇದ್ದಕ್ಕಿದ್ದಂತೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೊಂಚವೇ ಇಳಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ 93, 860 ರೂ.ಗಳಷ್ಟಾಗಿದೆ. ಇಂದು 93,335 ರೂ.ಗೆ ಬಂದು ನಿಂತಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ತಲಾ 1 ರೂ. ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 1 ರೂ. ಇಳಿಕೆಯಾಗಿದ್ದು 8,559 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 1 ರೂ. ಇಳಿಕೆಯಾಗಿದ್ದು ಇಂದು 9,337 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 1 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 7,003 ರೂ. ರಷ್ಟಾಗಿದೆ.
ಬೆಳ್ಳಿ ದರ
ಬೆಳ್ಳಿ ದರದಲ್ಲಿ ನಿನ್ನೆ ಕೊಂಚ ಮಟ್ಟಿಗೆ ಏರಿಕೆಯಾಗಿತ್ತು. ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆಜಿಗೆ 100 ರೂ.ಗಳಷ್ಟು ಇಳಿಕೆಯಾಗಿದ್ದು 98,900 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.