Daily Horoscope

Select Your Language

Notifications

webdunia
webdunia
webdunia
webdunia

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಕಳೆದ ಎರಡು ದಿನಗಳಿಂದ ಸತತವಾಗಿ ಚಿನ್ನದ ದರ ಇಳಿಕೆಯಾಗಿದ್ದರಿಂದ ಗ್ರಾಹಕರು ಖುಷಿಪಟ್ಟಿದ್ದರು. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಸತತವಾಗಿ ಏರಿಕೆಯಾಗುತ್ತಲೇ ಇತ್ತು. ಲಕ್ಷದ ಗಡಿ ದಾಟಿದ್ದ ಚಿನ್ನದ ದರ ಈಗ ಲಕ್ಷದೊಳಗೇ ಬಂದು ನಿಂತಿರುವುದು ಸಮಾಧಾನ. ಆದರೆ ಇಂದು ಪರಿಶುದ್ಧ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ದರ  95,500.00 ರೂ.ಗಳಿದ್ದಿದ್ದು ಇಂದು 96,340 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 8,720 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 9,513 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 7,135 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಇಳಿಕೆಯತ್ತ ಸಾಗಿತ್ತು.  ಇಂದು ಬೆಳ್ಳಿ ದರವೂ ಯಥಾಸ್ಥಿತಿಯಲ್ಲಿದೆ. ನಿನ್ನೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 97,000 ರೂ.ಗಳಾಗಿತ್ತು. ಇಂದೂ ಅದೇ ಬೆಲೆ ಮುಂದುವರಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ