ಬೆಂಗಳೂರು: ಚಿನ್ನದ ಬೆಲೆಯಲ್ಲಿ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದರಿಂದ ಚಿಂತೆಗೀಡಾಗಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿ. ಚಿನ್ನದ ಬೆಲೆ ಈಗ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಇಂದೂ ಪರಿಶುದ್ಧ ಚಿನ್ನದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆಗಿಂತ ಇಂದು ಕೊಂಚ ಏರಿಕೆಯೇ ಆಗಿದೆ. ಆದರೆ ಇತರೆ ಚಿನ್ನದ ದರದಲ್ಲಿ ಮಾತ್ರ ಇಳಿಕೆ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 090.00 ರೂ.ಗಳಷ್ಟಿತ್ತು. ಇಂದು ಪರಿಶುದ್ಧದ ಚಿನ್ನದ ದರ ಕೊಂಚವೇ ಏರಿಕೆಯಾಗಿದ್ದು 1,00,235.00 ರೂ. ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 93 ರೂ.ಗಳಷ್ಟು ಇಳಿಕೆಯಾಗಿದ್ದು 09,802 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 85 ರೂ.ಗಳಷ್ಟು ಇಳಿಕೆಯಾಗಿದ್ದು 8,985 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 69 ರೂ.ಗಳಷ್ಟು ಇಳಿಕೆಯಾಗಿದ್ದು 7,352 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಏರಿಕೆಯಾಗಿತ್ತು. ನಿನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ದರವೂ 100 ರೂ.ಗಳಷ್ಟು ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,07, 900 ರೂ. ಗಳಾಗಿದೆ.