Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold

Krishnaveni K

ಬೆಂಗಳೂರು , ಸೋಮವಾರ, 30 ಜೂನ್ 2025 (10:47 IST)
ಬೆಂಗಳೂರು: ವಾರಂತ್ಯದಲ್ಲಿ ಚಿನ್ನದ ಬೆಲೆ ಬರೋಬ್ಬರಿ ಇಳಿಕೆಯಾಗಿ ಜನರಿಗೆ ನೆಮ್ಮದಿಯಾಗಿತ್ತು. ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಜಾಗತಿಕ ಮಟ್ಟದಲ್ಲಿ ಯುದ್ಧದ ಸನ್ನಿವೇಶ ತಣ್ಣಗಾಗುತ್ತಿದ್ದಂತೇ ಚಿನ್ನದ ದರ ಇಳಿಕೆಯತ್ತ ಸಾಗಿತ್ತು. ವಾರಂತ್ಯದಲ್ಲಿ ಭರ್ಜರಿ ಇಳಿಕೆಯಾಗಿತ್ತು. ಇಂದೂ ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದ್ದು ಖರೀದಿದಾರರಿಗೆ ಸಂತಸ ತಂದಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 98, 875.00  ರೂ.ಗಳಷ್ಟಿತ್ತು. ಇಂದು ಪರಿಶುದ್ಧದ ಚಿನ್ನದ ದರ ಭಾರೀ ಇಳಿಕೆಯಾಗಿದ್ದು 98, 670.00 ರೂ. ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 16 ರೂ.ಗಳಷ್ಟು ಇಳಿಕೆಯಾಗಿದ್ದು 09,726 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 15 ರೂ.ಗಳಷ್ಟು ಇಳಿಕೆಯಾಗಿದ್ದು 8,915 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 13 ರೂ.ಗಳಷ್ಟು ಇಳಿಕೆಯಾಗಿದ್ದು 7,294 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಏರಿಕೆಯಾಗಿತ್ತು. ನಿನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ದರವೂ 100 ರೂ.ಗಳಷ್ಟು ಇಳಿಕೆಯಾಗಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,07, 700 ರೂ. ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ