ಬೆಂಗಳೂರು: ವಾರಂತ್ಯದಲ್ಲಿ ಚಿನ್ನದ ಬೆಲೆ ಬರೋಬ್ಬರಿ ಇಳಿಕೆಯಾಗಿ ಜನರಿಗೆ ನೆಮ್ಮದಿಯಾಗಿತ್ತು. ಆದರೆ ಇದೀಗ ಚಿನ್ನದ ಬೆಲೆ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರಂತ್ಯದಲ್ಲಿ ಚಿನ್ನದ ದರ ಇಳಿಕೆಯಾಗಿ ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈ ಖುಷಿ ಕೆಲವೇ ದಿನ ಮಾತ್ರ. ಇದೀಗ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಮತ್ತೆ ಏರುಗತಿಯಲ್ಲಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 370.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,00, 585.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 44 ರೂ.ಗಳಷ್ಟು ಏರಿಕೆಯಾಗಿದ್ದು 09,933 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ.ಗಳಷ್ಟು ಏರಿಕೆಯಾಗಿದ್ದು 9,105 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 33 ರೂ.ಗಳಷ್ಟು ಏರಿಕೆಯಾಗಿದ್ದು 7,450 ರೂ.ಗಳಷ್ಟಿದೆ.
ಬೆಳ್ಳಿ ದರ
ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆಯೂ ಏರಿಕೆಯಾಗುತ್ತಿದೆ. ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಏರಿಕೆ ಕಂಡಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,11, 000 ರೂ. ಗಳಾಗಿದೆ.