ಬೆಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಆದರೆ ಇಂದು ಮತ್ತೆ ಇಳಿಕೆಯಾಗಿದ್ದು ಕೊಂಚ ಸಮಾಧಾನ ತಂದಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ವಾರ ಇಳಿಕೆಯತ್ತ ಸಾಗಿದ್ದ ಚಿನ್ನದ ದರ ಈ ವಾರದ ಆರಂಭದಿಂದಲೇ ಏರಿಕೆಯಾಗಿ ಗ್ರಾಹಕರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು ಗ್ರಾಹಕರು ಸಮಾಧಾನಪಡುವಂತಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 585.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 99, 775.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಇಳಿಕೆಯಾಗಿದ್ದು 09,873 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ.ಗಳಷ್ಟು ಇಳಿಕೆಯಾಗಿದ್ದು 9,050 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 45 ರೂ.ಗಳಷ್ಟು ಇಳಿಕೆಯಾಗಿದ್ದು 7,405 ರೂ.ಗಳಷ್ಟಿದೆ.
ಬೆಳ್ಳಿ ದರ
ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆಯೂ ಏರಿಕೆಯಾಗುತ್ತಿತ್ತು. ಆದರೆ ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಇಳಿಕೆ ಕಂಡಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,10, 000 ರೂ. ಗಳಾಗಿದೆ.