ಬೆಂಗಳೂರು: ಚಿನ್ನದ ಬೆಲೆ ಇಂದು ಮತ್ತಷ್ಟು ದುಬಾರಿಯಾಗಿದೆ. ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಂದ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ನಿನ್ನೆ ಕೊಂಚ ಮಟ್ಟಿಗೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಮತ್ತಷ್ಟು ಏರಿಕೆ ಕಂಡಿದ್ದು ಗ್ರಾಹಕನ ಚಿಂತೆಗೆ ಕಾರಣವಾಗಿದೆ. ಆಷಾಢ ಮಾಸವಾಗಿದ್ದರೂ ಚಿನ್ನದ ದರದಲ್ಲಿ ಯಾವುದೇ ಇಳಿಕೆ ಕಂಡುಬರುತ್ತಿಲ್ಲ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 99,155.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,00,645.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 71 ರೂ.ಗಳಷ್ಟು ಏರಿಕೆಯಾಗಿದ್ದು 09,971 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 65 ರೂ.ಗಳಷ್ಟು ಏರಿಕೆಯಾಗಿದ್ದು 9,140 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 54 ರೂ.ಗಳಷ್ಟು ಏರಿಕೆಯಾಗಿದ್ದು 7,479 ರೂ.ಗಳಷ್ಟಿದೆ.
ಬೆಳ್ಳಿ ದರ
ಕಳೆದ ವಾರದ ಆರಂಭದಲ್ಲಿ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಏರಿಕೆಯೂ ಇಲ್ಲ ಇಳಿಕೆಯೂ ಆಗಿಲ್ಲ ಎಂಬ ಸ್ಥಿತಿಯಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲಂತೂ ದಾಖಲೆಯ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 4,000 ರೂ. ಏರಿಕೆಯಾಗಿದ್ದು 1,15, 000 ರೂ. ಗಳಾಗಿದೆ.