Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಕಳೆದ ಎರಡು ದಿನಗಳಿಂದ ಕೊಂಚ ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧು ಚಿನ್ನದ ದರ ಇಳಿಕೆಯಾಗಿದ್ದರೆ ಇತರೆ ಚಿನ್ನದ ದರ ಕೊಂಚ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಕೊಂಚವೇ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಹಾಗಿದ್ದರೂ ಪರಿಶುದ್ಧ ಚಿನ್ನದ ದರ ಇಂದೂ ಲಕ್ಷದ ಗಡಿ ದಾಟಿಯೇ ಇದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00,675.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 1,00,560.00   ರೂ.ಗಳಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ.ಗಳಷ್ಟು ಏರಿಕೆಯಾಗಿದ್ದು 09,938 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ.ಗಳಷ್ಟು ಏರಿಕೆಯಾಗಿದ್ದು 9,110 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 4 ರೂ.ಗಳಷ್ಟು ಏರಿಕೆಯಾಗಿದ್ದು 7,454 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಆದರೆ ಮೊನ್ನೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 5,000 ರೂ.ಗಳಷ್ಟು ಇಳಿಕೆಯಾಗಿತ್ತು. ನಿನ್ನೆ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ 100 ರೂ. ಇಳಿಕೆಯಾಗಿದ್ದು 1,13, 900 ರೂ. ಗಳಷ್ಟೇ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ