Publish Date: Wed, 30 Jul 2025 (11:14 IST)
Updated Date: Wed, 30 Jul 2025 (11:15 IST)
ಬೆಂಗಳೂರು: ಕಳೆದ ಎರಡು ದಿನ ಚಿನ್ನದ ದರ ಕೊಂಚ ಇಳಿಕೆಯಾಗಿ ಸಮಾಧಾನ ತಂದಿತ್ತು. ಆದರೆ ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದರೆ ಉಳಿದ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಚಿನ್ನದ ದರ ತಕ್ಕಮಟ್ಟಿಗೆ ಇಳಿಕೆಯಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮಾತ್ರ ಇಂದು ಕೇವಲ 40 ರೂ.ಗಳಷ್ಟು ಇಳಿಕೆಯಾಗಿದೆ. ಆದರೆ ಉಳಿದ ಚಿನ್ನದ ದರ ಮತ್ತೆ ಗಗನಕ್ಕೇರಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,01,390.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 1,01,350.00 ರೂ.ಗಳಾಗಿದೆ.
22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 66 ರೂ. ಏರಿಕೆಯಾಗಿದ್ದು 10,048 ರೂ.ಗಳಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ. ಏರಿಕೆಯಾಗಿದ್ದು 9,210 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 49 ರೂ. ಏರಿಕೆಯಾಗಿದ್ದು 7,536 ರೂ.ಗಳಷ್ಟಿದೆ.
ಬೆಳ್ಳಿ ದರ
ಬೆಳ್ಳಿ ದರ ಕಳೆದ ಮೂರು ದಿನಗಳಿಂದ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು ಕೊಂಚ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ ಬೆಳ್ಳಿ ದರ 1,000 ರೂ. ಗಳಷ್ಟು ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,17, 000 ರೂ. ಗಳಷ್ಟಾಗಿದೆ.